ಮೂಡುಬಿದಿರೆ: ಒಂಭತ್ತು ಮಾಗಣೆಗಳ ಆರಾಧ್ಯ ದೇವರಾಗಿರುವ ಹೊಸಂಗಡಿ-ಮಾರೂರಿನ ಶ್ರೀ ಗೋಪಾಲಕೃಷ್ಣ ದೇವರಿಗೆ ಶುಕ್ರವಾರ ಬೆಳಿಗ್ಗೆ ಬ್ರಹ್ಮಕಲಶೋತ್ಸವ ನೆರವೇರಿತು. ಎಡಪದವು ಬ್ರಹ್ಮಶ್ರೀ ಮುರಳೀಧರ ತಂತ್ರಿಗಳ ನೇತೃತ್ವದಲ್ಲಿ, ಮಾರೂರು ಖಂಡಿಗ ವೇದಮೂರ್ತಿ ರಾಮದಾಸ ಅಸ್ರಣ್ಣ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ವೆಂಕಟರಾಜ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಪೂರ್ವಾಹ್ನ 7.30ರ ವೃಷಭ ಲಗ್ನದಲ್ಲಿ ಶ್ರೀ ದೇವರಿಗೆ ಸಹಸ್ರ ಕುಂಭ ಬ್ರಹ್ಮಕಲಶಾಭಿಷೇಕವು ನ್ಯಾಸ ಪೂಜೆ, ಪ್ರತಿಜ್ಞಾ ವಿಧಿ, ಮಹಾಪೂಜೆ, ಅವಭೃತ ಬಲಿ, ಧ್ವಜಾವರೋಹಣ, ಪಲ್ಲ ಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಹೊಸಂಗಡಿ ಅರಮನೆಯ ಸಂಪತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮಾರೂರು ಗುತ್ತು ಶಂಭು ಎನ್. ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎ. ಜೀವಾಂಧರ ಕುಮಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ಶ್ರೀಪತಿ ಭಟ್, ಮುಂಬಯಿ ಸಮಿತಿಯ ಅಧ್ಯಕ್ಷ ಮಾರೂರು ಗುತ್ತು ಬೋಜ ಎನ್. ಶೆಟ್ಟಿ ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಕೆ. ಶೆಟ್ಟಿ, ಉಪಾಧ್ಯಕ್ಷರಾದ ಶ್ರೀಪತಿ ಬಡಕೋಡಿ, ಮಿತ್ತೊಟ್ಟುಗುತ್ತು ಸುಧಾಕರ ಶೆಟ್ಟಿ, ಕಾರ್ಯದರ್ಶಿ ಸುನಿಲ್ ಕುಮಾರ್ ಶೆಟ್ಟಿ ಮಾರೂರು, ಕೋಶಾಧ್ಯಕ್ಷ ಶಂಕರ ಎ. ಕೋಟ್ಯಾನ್, ಸ್ವಾಗತ ಸಮಿತಿಯ ಅಧ್ಯಕ್ಷ ರಮೇಶ್ ಎಸ್. ಶೆಟ್ಟಿ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಒಂಭತ್ತು ಮಾಗಣೆಗಳಿಂದ ಆಗಮಿಸಿದ ಭಕ್ತಾದಿಗಳು ಪಾಲ್ಗೊಂಡರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರೂ ವಂದಿಸಿದರು.