ಮೂಡುಬಿದಿರೆ: ಮೇ ಡೇ ಆಚರಣಾ ಸಮಿತಿಯ ವತಿಯಿಂದ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಅಂತರರಾಷ್ಟ್ರೀಯ ದಿನವನ್ನು ಶುಕ್ರವಾರ ಆಚರಿಸಲಾಯಿತು.
ಕಾರ್ಮಿಕ ವಿರೋಧಿ ಸಂಹಿತೆಯನ್ನು ವಿರೋಧಿಸಿ ಮತ್ತು ಕನಿಷ್ಠ ಕೂಲಿಯನ್ನು ತಕ್ಷಣ ಪರಿಷ್ಕರಿಸಲು ಒತ್ತಾಯಿಸಿ ಮೂಡುಬಿದಿರೆ ತಹಶೀಲ್ದಾರ್ ಕಚೇರಿಯ ಮುಂಭಾಗ ಸಾರ್ವಜನಿಕ ಸಭೆ ನಡೆಸಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಯಾದವ ಶೆಟ್ಟಿ, ತರಕಾರಿ, ಮೀನು, ಮಾಂಸ ಸೇರಿದಂತೆ ದಿನಸಿ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸಾಮಾನ್ಯ ಜನರ ಬದುಕು ದುಸ್ತರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಬೀಡಿ, ಬಿಸಿಯೂಟ ಹಾಗೂ ಇತರ ಕ್ಷೇತ್ರಗಳಲ್ಲಿ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ವೇತನ ಸಿಗುವವರೆಗೆ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಉಪಾಧ್ಯಕ್ಷ ವಸಂತ ಆಚಾರಿ, ಸಿಐಟಿಯು ಮೂಡುಬಿದಿರೆ ಸಂಘಟನೆಯ ಕಾರ್ಯದರ್ಶಿ ರಾಧಾ, ಉಪಾಧ್ಯಕ್ಷೆ ಗಿರಿಜಾ, ಜತೆ ಕಾರ್ಯದರ್ಶಿ ಲಕ್ಷ್ಮಿ, ಕಟ್ಟಡ ಕಾರ್ಮಿಕರ ಸಂಘದ ಉಪಾಧ್ಯಕ್ಷ ಜಯಾನಂದ ಮಾರೂರು, ಬಿಸಿಯೂಟ ಸಂಘದ ಮೂಡುಬಿದಿರೆ ತಾಲೂಕು ಅಧ್ಯಕ್ಷೆ ಶೋಭಾ ಉಪಸ್ಥಿತರಿದ್ದರು. ಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಭೆಯ ಮುನ್ನ ಮೂಡುಬಿದಿರೆ ಸಿಐಟಿಯು ಕಚೇರಿಯಿಂದ ತಾಲೂಕು ಕಚೇರಿಯವರೆಗೆ ಕಾರ್ಮಿಕರ ಮೆರವಣಿಗೆ ನಡೆಯಿತು.
ಮೂಡುಬಿದಿರೆ: ಸಿಐಟಿಯು ನೇತೃತ್ವದಲ್ಲಿ ಮೇ ಡೇ ಆಚರಣೆ: ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನಾ ಸಭೆ
ಮೂಡುಬಿದಿರೆ: ಸಿಐಟಿಯು ನೇತೃತ್ವದಲ್ಲಿ ಮೇ ಡೇ ಆಚರಣೆ: ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನಾ ಸಭೆ