ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಇವರ ಜಂಟಿ ಆಶ್ರಯದಲ್ಲಿ ಬೃಹತ್ ಹಲಸು ಮೇಳದ ಪ್ರಯುಕ್ತ 'ವಾಯ್ಸ್ ಆಫ್ ಬೆದ್ರ' ಸಂಗೀತ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯು ಮೇ 10, 2026ರ ಆದಿತ್ಯವಾರ ಬೆಳಿಗ್ಗೆ 10:00 ಗಂಟೆಯಿಂದ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯ ಮುಂಡ್ರುದೆ ಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ನಗದು ಬಹುಮಾನದೊಂದಿಗೆ ಶಾಶ್ವತ ಫಲಕವನ್ನು ನೀಡಿ ಗೌರವಿಸಲಾಗುವುದು. ಗಾಯನ ಆಸಕ್ತರು ಸ್ಪರ್ಧೆಯ 30 ನಿಮಿಷ ಮುಂಚಿತವಾಗಿ ಹೆಸರನ್ನು ನೋಂದಾಯಿಸಿ ಟೋಕನ್ ಪಡೆದುಕೊಳ್ಳಬೇಕಿದೆ. ಸ್ಪರ್ಧೆಗೆ ಹಾಜರಾಗುವವರು ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿದ್ದು, ಪ್ರತಿಯೊಬ್ಬ ಸ್ಪರ್ಧಿಗೆ ಗರಿಷ್ಠ ಒಂದು ನಿಮಿಷದ ಕಾಲಾವಕಾಶ ನೀಡಲಾಗುತ್ತದೆ. ಈ ಸ್ಪರ್ಧೆಯಲ್ಲಿ ಕರೋಕೆ ಬಳಸಲು ಅವಕಾಶವಿರುವುದಿಲ್ಲ ಹಾಗೂ ಸ್ಪರ್ಧಿಗಳ ರಾಗ, ತಾಳ ಮತ್ತು ಸ್ವರದ ಏರಿಳಿತಗಳನ್ನು ಗಮನಿಸಿ ತೀರ್ಪುಗಾರರು ವಿಜೇತರನ್ನು ಆಯ್ಕೆ ಮಾಡಲಿದ್ದಾರೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಘಟಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.