ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಇವರ ನೇತೃತ್ವದಲ್ಲಿ ಮೇ 10ರ ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯ ಮುಂಡ್ರುದೆ ಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಬೃಹತ್ ಹಲಸು ಮೇಳದ ಪ್ರಯುಕ್ತ ಅಡುಗೆ ಸ್ಪರ್ಧೆ ನಡೆಯಲಿದೆ. ಮಹಿಳೆಯರ ವಿಭಾಗದಲ್ಲಿ ಬೆಂಕಿ ಬಳಸಿ ಮನೆಯಲ್ಲೇ ಅಡುಗೆ ಸಿದ್ಧಪಡಿಸಿ ತರಲು ಅವಕಾಶ ಕಲ್ಪಿಸಲಾಗಿದೆ. ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೆಂಕಿ ಇಲ್ಲದ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದ್ದು, ಒಂದು ತಂಡದಲ್ಲಿ ಮೂವರು ಭಾಗವಹಿಸಲು ಅವಕಾಶವಿದೆ. ವಿದ್ಯಾರ್ಥಿಗಳಿಗೆ ತಯಾರಿಯ ಸಲುವಾಗಿ 1 ಗಂಟೆ ಕಾಲಾವಕಾಶ ನೀಡಲಾಗುವುದು. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರು 30 ನಿಮಿಷ ಮೊದಲೇ ಹೆಸರು ನೋಂದಾಯಿಸಿ ಟೋಕನ್ ಪಡೆದುಕೊಳ್ಳಬೇಕು. ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.