ಮೂಡುಬಿದಿರೆ:ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಖಾಸಗಿ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬಿಜೆಪಿ ಹಿರಿಯ ಮುಖಂಡ ಕೆ.ಆರ್ ಪಂಡಿತ್ ಮಾತನಾಡಿ, ಪಶ್ಚಿಮ ಬಂಗಾಲದಲ್ಲಿ ಮಮತಾ ಬ್ಯಾನರ್ಜಿ ಆಡಳಿತದಿಂದ ಹಿಂದೂಗಳ ಬದುಕು ದುಸ್ತರವಾಗಿತ್ತು, ಅಲ್ಲಿನ ಜನತೆ ಈಗ ಸೂಕ್ತ ಪಾಠ ಕಲಿಸಿದ್ದಾರೆ . ಕರ್ನಾಟಕದಲ್ಲಿಯೂ ಹಿಂದೂಗಳನ್ನು ಕಡೆಗಣಿಸಿ ಅಲ್ಪಸಂಖ್ಯಾತರ ಓಲೈಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಈ ಫಲಿತಾಂಶವು ಎಚ್ಚರಿಕೆಯ ಗಂಟೆಯಾಗಿದೆ ಎಂದು ತಿಳಿಸಿದರು. ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಕಾರ್ಯದರ್ಶಿ ರಂಜಿತ್ ಪೂಜಾರಿ, ಯುವ ಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್, ಪ್ರಮುಖರಾದ ಲಕ್ಣ್ಮಣ್ ಪೂಜಾರಿ, ಶಾಂತಿ ಪ್ರಸಾದ್ ಹೆಗ್ಡೆ, ನಾಗರಾಜ ಪೂಜಾರಿ, ಅಶ್ವತ್ಥ್ ಪಣಪಿಲ, ಭರತ್ ಶೆಟ್ಟಿ, ಸಚಿನ್ ಪಣಪಿಲ, ಕಾರ್ಯಕರ್ತರು ಪಾಲ್ಗೊಂಡಿದ್ದರು.