ಮೂಡುಬಿದಿರೆ:ಉಪ್ಪಿನಂಗಡಿಯ ಕದಿಕಾರು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಏಕಶಿಲಾ ಚತುರ್ಮುಖ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ, ಧಾಮ ಸಂಪ್ರೋಕ್ಷಣಾಪೂರ್ವಕ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಬಿಂಬಗಳ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯುತ್ತಿದೆ.
ಈ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ವೇಳೆ ಕದಿಕಾರು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸೇವಾ ಟ್ರಸ್ಟ್ ಉಪ್ಪಿನಂಗಡಿ ಇದರ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.
ಪ್ರಮಯಿ ಜೈನ್ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು. ವಿದುಷಿ ನಯನಾ, ಅಶಿಶ್ ಅಂಚನ್, ಧನಂಜಯ್ ಜೈನ್ ವೇಣೂರು, ವಿತೇಶ್ ಜೈನ್ ಪಡಂಗಡಿ ಸಹಕರಿಸಿದರು.