ಮೂಡುಬಿದಿರೆ: ಇಲ್ಲಿನ ವಿಶ್ವವಿದ್ಯಾನಿಲಯ ಕಾಲೇಜು ಬನ್ನಡ್ಕ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಯೋಜನೆಯಲ್ಲಿ ಎಂ. ಸುಕುಮಾರ್ ಶೆಟ್ಟಿ ಹಾಗೂ ಶಿರ್ವ ಗ್ರೇಸಿ ಮಚಾದೋ ಟ್ರೋಫಿಗಾಗಿ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ಅಂತರಕಾಲೇಜು ಸಾಫ್ಟ್ ಬಾಲ್ ಪಂದ್ಯಾವಳಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಪಂದ್ಯಾಟ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸಾಫ್ಟ್ ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಾಲ್ವರು ಆಟಗಾರ್ತಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯೋಜಕ ಡಾ. ಕೆ. ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಮೂಡುಬಿದಿರೆ ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಹಾಗೂ ಪಡುಮಾರ್ನಾಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದಯಾನಂದ ಪೈ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ರತ್ನಾಕರ ಪುತ್ರಾಯ ಸ್ವಾಗತಿಸಿದರು. ಉಪನ್ಯಾಸಕ ಸುಧಾಕರ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಸಂತೋಷ್ ವಂದಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.