ಮೂಡುಬಿದಿರೆ: ಕಡಂದಲೆ ಗ್ರಾಮದ ಕಲ್ಲೋಳಿ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಭಾಗದಲ್ಲಿ ನೂರಾರು ಮನೆಗಳಿದ್ದು ಸಾವಿರಾರು ಮತದಾರರಿದ್ದರೂ ರಸ್ತೆಯ ಸ್ಥಿತಿ ಶೋಚನೀಯವಾಗಿದೆ. ಇದರಿಂದಾಗಿ ಯಾವುದೇ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ತುರ್ತು ಸಂದರ್ಭಗಳಲ್ಲಿ ಆಟೋ ಚಾಲಕರು ಕೂಡ ಈ ಭಾಗಕ್ಕೆ ಬರಲು ನಿರಾಕರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಕಳೆದ 2022ರ ಜುಲೈ 9ರಂದು ನೆರೆ ಹಾನಿಯಾದ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಈ ಭಾಗಕ್ಕೆ ಭೇಟಿ ನೀಡಿ ಗ್ರಾಮದ ಅಭಿವೃದ್ಧಿಯ ಭರವಸೆ ನೀಡಿದ್ದರು. ಆದರೆ ನಾಲ್ಕು ವರ್ಷಗಳು ಕಳೆದರೂ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಳೆಗಾಲ ಹತ್ತಿರ ಬರುತ್ತಿರುವುದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ, ನೆರೆ ಹಾವಳಿ ಮರುಕಳಿಸದಂತೆ ರಸ್ತೆ ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅರುಣ್ ಶೆಟ್ಟಿ, ಅತಿತ್ ಶೆಟ್ಟಿ, ಸುನಿಲ್ ಪೂಜಾರಿ, ಸಂತೋಷ ಶೆಟ್ಟಿಗಾರ್, ನಾಗೇಶ್ ಶೆಟ್ಟಿಗಾರ್, ಅಶ್ವಥ್ ಪೂಜಾರಿ, ಸಂದೀಪ್ ಪೂಜಾರಿ, ಭರತ್ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.