ಮೂಡುಬಿದಿರೆ:ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ಕರ್ನಾಟಕ ಸಹಯೋಗದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ವತಿಯಿಂದ ಮೈಸೂರಿನ ಕನ್ನಡ ಭವನದಲ್ಲಿ ಮೇ 3ರಂದು ಕವಿ-ಕಾವ್ಯ ಸಂಭ್ರಮ ಮತ್ತು ರತ್ನ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕಿನ ವೇಣೂರು ನಿಟ್ಟಡೆಯ ಯಶ್ವಿತ್ ಎಚ್. ಕುಲಾಲ್ ಅವರಿಗೆ ‘ಲಿಟಲ್ ಸ್ಟಾರ್ ಆಫ್ ಕರ್ನಾಟಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ಏಳನೇ ತರಗತಿ ವಿದ್ಯಾರ್ಥಿಯಾಗಿರುವ ಯಶ್ವಿತ್ ಎಚ್. ಕುಲಾಲ್ ಬಹುಮುಖ ಪ್ರತಿಭೆಯಾಗಿದ್ದು, ನೃತ್ಯ ಕ್ಷೇತ್ರದಲ್ಲಿ ತೋರಿದ ಸಾಧನೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರು ವಾಯ್ಸ್ ಆಫ್ ಆರಾಧನ ಸಾಂಸ್ಕೃತಿಕ ಸಂಸ್ಥೆಯ ಸದಸ್ಯರಾಗಿದ್ದು, ಈ ಹಿಂದೆ ಬಂಟ್ವಾಳ ಮತ್ತು ಕಾರ್ಕಳ ಸೆಂಟ್ರಲ್ ಲಯನ್ಸ್ ಕ್ಲಬ್‌ಗಳು ಇವರ ಪ್ರತಿಭೆಯನ್ನು ಗುರುತಿಸಿ ಗೌರವಿಸಿವೆ. 2025ರ ಜುಲೈನಲ್ಲಿ ಏರ್ಯ ಆಳ್ವ ಫೌಂಡೇಶನ್ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಆಯೋಜಿಸಿದ್ದ ಕವನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿಯೂ ತಾಲೂಕು ಮಟ್ಟದ ಹಲವು ಪ್ರಶಸ್ತಿಗಳನ್ನು ಗೆದ್ದಿರುವ ಯಶ್ವಿತ್ ಎಚ್. ಕುಲಾಲ್, ನಿಟ್ಟಡೆ ಕುಂಭಶ್ರೀ ಶಾಲಾ ಬಳಿಯ ಮೋದಕ ಮನೆ ನಿವಾಸಿ ಹರೀಶ್ ಪಿ. ಮತ್ತು ವನಿತಾ ಕೆ. ದಂಪತಿಯ ಪುತ್ರ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.