ಮೂಡುಬಿದಿರೆ: ಇಲ್ಲಿನ ಪೇಟೆ ಹಾಗೂ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿದ್ದಾರೆ.

ಮೂಡುಬಿದಿರೆ ನಗರದಲ್ಲಿ ಗುರುವಾರ ಕಾರ್ಯಾಚರಣೆ ನಡೆಸಿದ ಸಮಾಜ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಿರಾಶ್ರಿತರ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಗಳು ಬಸ್ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆ ಮತ್ತು ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಬಸ್ ನಿಲ್ದಾಣದಲ್ಲಿಯೇ ಮಲಗಿದ್ದ ವೃದ್ಧರನ್ನು ವಶಕ್ಕೆ ತೆಗೆದುಕೊಂಡರು. ರಕ್ಷಿಸಲ್ಪಟ್ಟ ಇಬ್ಬರನ್ನು ಮಂಗಳೂರಿನಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಸೇರಿಸಲಾಯಿತು.