ಮೂಡುಬಿದಿರೆ: ಇಲ್ಲಿನ ರಾಮಪುರ ಗೌರಿಕೆರೆಯ ಶ್ರೀ ರಾಮ ಮಂದಿರದಲ್ಲಿ ಸಪರಿವಾರ ಶ್ರೀ ರಾಮ ದೇವರ ಬಿಂಬ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು.
ದೇವಾಡಿಗರ ಸುಧಾರಕ ಸಂಘದ ಆಡಳಿತಕ್ಕೊಳಪಟ್ಟಿರುವ ಈ ಮಂದಿರದಲ್ಲಿ ವೇದಮೂರ್ತಿ ಬ್ರಹ್ಮಶ್ರೀ ತೆಂಕುಮನೆ ಎಡಪದವು ಬಿ. ಮುರಳೀಧರ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.
ಶುಕ್ರವಾರ ಬೆಳಗ್ಗೆ ಪುಣ್ಯಾಹ ವಾಚನ, ತ್ರಿಮಧುರ ಗಣಯಾಗ, ಶ್ರೀ ರಾಮ ದೇವರಿಗೆ 108 ಕಲಶ ಸಹಿತ ಬ್ರಹ್ಮ ಕಲಶಾಭಿಷೇಕ ನೆರವೇರಿತು.ಇದೇ ವೇಳೆ ಪರಿವಾರ ದೇವರುಗಳಾದ ಶ್ರೀ ರಕ್ತೇಶ್ವರಿ ಮತ್ತು ಶ್ರೀ ಚಾಮುಂಡೇಶ್ವರಿ ದೇವಿಗೆ ಕಲಶಾಭಿಷೇಕ ನಡೆಯಿತು.
ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ರತ್ನಾಕರ ಸಿ. ಮೊಯಿಲಿ, ಅಧ್ಯಕ್ಷ ಪುರಂದರ ದೇವಾಡಿಗ, ಕಾರ್ಯಾಧ್ಯಕ್ಷರಾದ ವಿಶ್ವನಾಥ ಪಿ. ದೇವಾಡಿಗ, ಶಶಿಧರ ಎಸ್. ದೇವಾಡಿಗ ಶಿರ್ತಾಡಿ, ಪ್ರಧಾನ ಕಾರ್ಯದರ್ಶಿ ರಮೇಶ್ ದೇವಾಡಿಗ, ಕೋಶಾಧಿಕಾರಿ ಸತೀಶ್ , ಕ್ಷೇತ್ರದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಭಟ್ ಅಲಂಗಾರು ದೇವಾಡಿಗ ಸುಧಾರಕ ಸಂಘದ ಪದಾಧಿಕಾರಿಗಳು, ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.
ಮೂಡುಬಿದಿರೆ: ರಾಮಪುರ ಗೌರಿಕೆರೆಯ ಶ್ರೀ ರಾಮ ಮಂದಿರದಲ್ಲಿ ಬ್ರಹ್ಮಕಲಶೋತ್ಸವ
ಮೂಡುಬಿದಿರೆ: ರಾಮಪುರ ಗೌರಿಕೆರೆಯ ಶ್ರೀ ರಾಮ ಮಂದಿರದಲ್ಲಿ ಬ್ರಹ್ಮಕಲಶೋತ್ಸವ