ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡ್ಡೋಡಿ ದಡ್ಡು ಪೆಟ್ರೋಲ್ ಬಂಕ್ ಸಮೀಪ, ಮೂಲ್ಕಿ-ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಗಣಪತಿಕಾಯಿ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದ್ದು, ಮರ ಬೀಳುವ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ.

ರಾಜ್ಯ ಹೆದ್ದಾರಿ 67ಕ್ಕೆ ಹತ್ತಿರವಿರುವ ಈ ಭಾಗದಲ್ಲಿ ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದಿರುವುದರಿಂದ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.