ಮೂಡುಬಿದಿರೆ: ಮಹಾರಾಷ್ಟ್ರದ ಬಲ್ಹಾರಷ್ನಲ್ಲಿ ನಡೆದ 2025-26ನೇ ಸಾಲಿನ ಸೀನಿಯರ್ ವಿಭಾಗದ 19ನೇ ರಾಷ್ಟ್ರಮಟ್ಟದ ಫ್ಲೋರ್ಬಾಲ್ ಚಾಂಪಿಯನ್ಷಿಪ್ನಲ್ಲಿ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ವಿಕ್ರೀತಾ ಒಳಗೊಂಡ ಕರ್ನಾಟಕ ತಂಡವು ಕಂಚಿನ ಪದಕ ಗೆದ್ದು ತೃತೀಯ ಸ್ಥಾನ ಪಡೆದಿದೆ. ಹರೀಶ್ ಪೂಜಾರಿ ಮತ್ತು ರಾಜೀವಿ ದಂಪತಿಯ ಪುತ್ರಿಯಾದ ವಿಕ್ರೀತಾ ಪದವಿಪೂರ್ವ ಶಿಕ್ಷಣದ ಅವಧಿಯಿಂದಲೇ ಫ್ಲೋರ್ಬಾಲ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದು, ನವೀನ್ ಎಂ. ಹೆಗ್ಡೆ ಅವರಿಂದ ತರಬೇತಿ ಪಡೆದಿದ್ದಾರೆ. ಈ ಹಿಂದೆ 2025ರ ಸೆಪ್ಟೆಂಬರ್ನಲ್ಲಿ ಬಿಹಾರದ ಮುಜಾಫರ್ ಪುರದಲ್ಲಿ ನಡೆದ ರಾಷ್ಟ್ರಮಟ್ಟದ ಟೂರ್ನಮೆಂಟ್ನಲ್ಲಿಯೂ ತೃತೀಯ ಸ್ಥಾನ ಗಳಿಸಿದ್ದ ಈಕೆ ಅತ್ಯುತ್ತಮ ರಕ್ಷಣಾ ಆಟಗಾರ್ತಿ ಎಂಬ ವೈಯಕ್ತಿಕ ಬಹುಮಾನವನ್ನೂ ಪಡೆದಿದ್ದರು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.