ಮೂಡುಬಿದಿರೆ: ಇಲ್ಲಿನ ಸಮಗಾರಗುಂಡಿ ಸಮೀಪ ಬಲ್ಲಾಳ್ ಹೋಟೆಲ್ ಎದುರು ಕಾರು ಪಾರ್ಕಿಂಗ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಡಿಕ್ಕಿಯ ಪರಿಣಾಮ ಕಾರಿನ ಹಿಂಭಾಗ ಭಾಗಶಃ ಜಖಂಗೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಟೆಂಪೋ ಟ್ರಾವೆಲರ್ ಚಾಲಕ ವಾಹನವನ್ನು ನಿಲ್ಲಿಸದೆ ತೆರಳಲು ಯತ್ನಿಸಿದ ವೇಳೆ ಸ್ಥಳೀಯರು ವಾಹನವನ್ನು ತಡೆದು ನಿಲ್ಲಿಸಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.