ಮೂಡುಬಿದಿರೆ: ಕಾರ್ಕಳದಿಂದ ಮೂಡುಬಿದಿರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ವಿಶಾಲ್ ಹೆಸರಿನ ಖಾಸಗಿ ಬಸ್ ಬನ್ನಡ್ಕ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಮೂಡುಬಿದಿರೆ: ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ವಿಶಾಲ್ ಹೆಸರಿನ ಖಾಸಗಿ ಬಸ್ ಬನ್ನಡ್ಕ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ

ಇದೇ ಸಂದರ್ಭದಲ್ಲಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸ್ಕೂಟಿ ಸವಾರನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಭಾಗದಲ್ಲಿ ಹೆದ್ದಾರಿ ಇಲಾಖೆಯ ಬೇಜವಾಬ್ದಾರಿಯಿಂದ ರಸ್ತೆಯನ್ನು ಏಕಮುಖ (ಒನ್ ವೇ) ಸಂಚಾರಕ್ಕೆ ಮುಕ್ತಗೊಳಿಸಿರುವುದು ಅಪಘಾತಕ್ಕೆ ಮುಖ್ಯ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.