ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ರಿಂಗ್ರೋಡ್ನ ಒಂಟಿಕಟ್ಟೆ ಕ್ರಾಸ್ ಬಳಿ ಶನಿವಾರ ಸಂಜೆ ಆಟೋ ರಿಕ್ಷಾವೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮೂಡುಬಿದಿರೆ ಕಡೆಯಿಂದ ಒಂಟಿಕಟ್ಟೆ ಕಡೆಗೆ ತಮ್ಮ ಆಟೋದಲ್ಲಿ ಹೋಗುತ್ತಿದ್ದ ಸ್ಥಳೀಯ ನಿವಾಸಿ, ಚಾಲಕ ಕೃಷ್ಣಪ್ಪ ಅವರು, ಏಕಾಏಕಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಆಟೋವನ್ನು ತಿರುಗಿಸುವ ವೇಳೆ ನಿಯಂತ್ರಣ ತಪ್ಪಿ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕೃಷ್ಣಪ್ಪ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.