ಮೂಡುಬಿದಿರೆ:‌ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾದ್ವಿ ಅವರಿಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

622 ಅಂಕ ಗಳಿಸುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ಗಮನ ಸೆಳೆದಿರುವ ಈಕೆ ಪ್ರಭಾಕರ್ ಮತ್ತು ಮಮತಾ ದಂಪತಿ ಪುತ್ರಿ.

ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷೆ ನಾಗರತ್ನ ಶಿರೂರು ವಿದ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸಿ ಶುಭ ಹಾರೈಸಿದರು. ಸಂಘದ ಉಪಾಧ್ಯಕ್ಷ ಸುಧಾಕರ್ ಸಾಲ್ಯಾನ್ ವಿದ್ಯಾರ್ಥಿನಿಯ ಶೈಕ್ಷಣಿಕ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಮಹೇಶ್ವರಿ, ರೇಣುಕಾ, ಗೀತಾ ಮತ್ತು ಪ್ರಶಾಂತ್ ಇದ್ದರು.