ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವಿನಲ್ಲಿ ಭಾನುವಾರ ನೆರೆಕರೆಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಕೋಲ ನಡೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಬಿರಾವು ನಿವಾಸಿ ಜಯಂತ್ (55) ಮೃತಪಟ್ಟಿದ್ದಾರೆ.
ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವಿನಲ್ಲಿ ಭಾನುವಾರ ನೆರೆಕರೆಯ ಸಂಬಂಧಿಕರ ಮನೆಯಲ್ಲಿ ಕೋಲ ನಡೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಬಿರಾವು ನಿವಾಸಿ ಜಯಂತ್ (55) ಮೃತಪಟ್ಟಿದ್ದಾರೆ.
ರೋಟರಿ ಶಾಲೆಯ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಜಯಂತ್, ಭಾನುವಾರ ರಾತ್ರಿ ತಮ್ಮ ಬಾವನ ಮನೆಯಲ್ಲಿ ನಡೆಯುತ್ತಿದ್ದ ದೈವದ ಕೋಲಕ್ಕೆ ತೆರಳಿದ್ದರು. ಕಾರ್ಯಕ್ರಮದ ಮಧ್ಯೆ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರು ಕೊನೆಯುಸಿರೆಳೆದಿದ್ದಾರೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಕೋಲೋತ್ಸವವನ್ನು ಅರ್ಧದಲ್ಲೇ ನಿಲ್ಲಿಸಲಾಯಿತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.