ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಬನ್ನಡ್ಕದಲ್ಲಿ ಸತತವಾಗಿ ಸಂಭವಿಸುತ್ತಿರುವ ಅಪಘಾತಗಳ ಕುರಿತು ಚರ್ಚಿಸಲು ಪಡುಮಾರ್ನಾಡು ಗ್ರಾಮಸ್ಥರು ಸೋಮವಾರ ಸಂಜೆ ಸಭೆ ನಡೆಸಿದರು. 2023ರಿಂದ 2026ರ ಅವಧಿಯಲ್ಲಿ ಇಲ್ಲಿ 15ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ 8 ಮಂದಿ ಮೃತಪಟ್ಟಿದ್ದು, ಕಳೆದ ಮೂರೇ ದಿನಗಳಲ್ಲಿ 4 ಅಪಘಾತಗಳು ನಡೆದಿರುವುದು ಆತಂಕ ಮೂಡಿಸಿದೆ. ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ಇಲ್ಲದ ಕಾರಣ ಸಾರ್ವಜನಿಕರು ರಸ್ತೆ ದಾಟಲು ಹರಸಾಹಸ ಪಡುತ್ತಿದ್ದಾರೆ. ಈ ಸಮಸ್ಯೆಯನ್ನು ತಕ್ಷಣ ಬಗೆಹರಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಬೇಕೆಂದು ಸೂರಜ್ ಮಾರ್ನಾಡ್ ಸಭೆಯಲ್ಲಿ ತಿಳಿಸಿದರು. ಸಮಸ್ಯೆಯ ಗಂಭೀರತೆಯನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರ ಗಮನಕ್ಕೆ ತರಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮಂಗಳವಾರ ಬೆಳಿಗ್ಗೆ 9:30ಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ತಹಸಿಲ್ದಾರ್, ಪೊಲೀಸ್ ಅಧಿಕಾರಿಗಳು ಹಾಗೂ ಡಿಬಿಎಲ್ ಕಾಂಟ್ರಾಕ್ಟರ್‌ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ. ಬನ್ನಡ್ಕದಿಂದ ಅಲಂಗಾರು ಕಡೆಗೆ ರಸ್ತೆಯ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ಹಾಗೂ ಸರಿಯಾದ ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಲಿದ್ದಾರೆ. ಸಭೆಯಲ್ಲಿ ನಿತಿನ್ ಕೋಟ್ಯಾನ್, ಸಂತೋಷ್, ಅಕ್ಷಯ್, ಸುಧಾಕರ್ ಆಚಾರ್ಯ, ಸಂತೋಷ್ ಜೈನ್, ಸುರೇಶ್ ಅಂಚನ್, ಪ್ರೀತಮ್ ಸೇರಿದಂತೆ ಊರಿನ ನಾಗರಿಕರು ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.