ಮೂಡುಬಿದಿರೆ: ಪಡುಮರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಣಕಜೆ ಎಂಬಲ್ಲಿ ಮಂಗಳವಾರ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ತೆಂಗಿನಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾದ ಘಟನೆ ಸಂಭವಿಸಿದೆ. ಶಂಕರ್ ಬಸವನೆಕಜೆ ಅವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಮನೆಯ ಚಛಾವಣಿಯ ಹಂಚುಗಳು ಪುಡಿಯಾಗಿವೆ. ಘಟನೆಯ ನಡೆದ ಸಂದರ್ಭದಲ್ಲಿ ಮನೆಯವರೆಲ್ಲರೂ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿದ್ದರು.