ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ಹಾಗೂ ಪಡುಮಾರ್ನಾಡು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಜಂಟಿ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಮಂಗಳವಾರ ಅಚ್ಚರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡಿತು. ಐದು ದಿನಗಳ ಕಾಲ ನಡೆಯುವ ಈ ಶಿಬಿರಕ್ಕೆ ಪಡುಮಾರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ ಚಾಲನೆ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅಚ್ಚರಕಟ್ಟೆ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲಾ ಶೆಟ್ಟಿ ಉಪಸ್ಥಿತರಿದ್ದರು. ಗ್ರಾಮೀಣ ಮಕ್ಕಳ ಸಂಜೀವಿನಿ ಒಕ್ಕೂಟದ ನಾಗಶ್ರೀ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಅತಿಥಿಯಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಹರ್ಷಾ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ವನಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಸಿಬ್ಬಂದಿ ಕಿಶೋರ್ ಮತ್ತು ರಾಜು ಕಾರ್ಯಕ್ರಮ ನಿರೂಪಿಸಿದರು. ಕೃತಿಕಾ ವಂದಿಸಿದರು. ಈ ಬೇಸಿಗೆ ಶಿಬಿರದಲ್ಲಿ ಒಟ್ಟು 34 ಮಕ್ಕಳು ಭಾಗವಹಿಸಿದ್ದು, ಯೋಗ, ಪಾಸಿಂಗ್ ದ ಬಾಲ್, ಶಟಲ್ ಬ್ಯಾಟ್, ನೃತ್ಯ, ಸಂಗೀತ, ಐಕ್ಯೂ ಟೆಸ್ಟ್, ಬ್ರೈನ್ ಟೆಸ್ಟ್ ಹಾಗೂ ಹುಲಿ-ದನ ಆಟಗಳಲ್ಲಿ ಮಕ್ಕಳು ಪಾಲ್ಗೊಂಡರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.