ಮೂಡುಬಿದಿರೆ: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ಯೋಜನೆ ಪ್ರಾಯೋಜಕತ್ವದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕ ಮತ್ತು ವಿಚೀಸ್ ಕೌಶಲ್ಯ ಕೇಂದ್ರದ ಸಹಕಾರದೊಂದಿಗೆ ಹದಿನೈದು ದಿನಗಳ ಉಚಿತ ಫ್ಯಾಷನ್ ಡಿಸೈನ್ ತರಬೇತಿಯು ಸಮಾಜ ಮಂದಿರದಲ್ಲಿ ಉದ್ಘಾಟನೆಗೊಂಡಿತು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಹೆಚ್ಚಿನ ಕೌಶಲ್ಯಗಳನ್ನು ಕಲಿತು ಸ್ವಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಭಾರತೀಯ ವಿಕಾಸ ಟ್ರಸ್ಟ್ ಕಾರ್ಯಕ್ರಮ ವ್ಯವಸ್ಥಾಪಕ ಜೀವನ್ ಕೊಲ್ಯ ತರಬೇತಿಯ ಮುಖ್ಯ ಉದ್ದೇಶ ಹಾಗೂ ನಿಯಮಗಳ ಕುರಿತು ಮಾಹಿತಿ ನೀಡಿದರು. ಕೆನರಾ ಬ್ಯಾಂಕ್ ಅಮೂಲ್ಯ ಆರ್ಥಿಕ ಸಾಕ್ಷರತಾ ಯೋಜನೆಯ ಸಮಾಲೋಚಕ ಲತೀಶ್ ಮಾತನಾಡಿ, ಸ್ವಉದ್ಯೋಗ ಕೈಗೊಳ್ಳಲು ಬ್ಯಾಂಕ್‌ಗಳಿಂದ ಲಭಿಸುವ ಸಾಲ ಸೌಲಭ್ಯಗಳು ಮತ್ತು ವಿಮಾ ಯೋಜನೆಗಳ ಬಗ್ಗೆ ವಿವರ ನೀಡಿದರು. ಯುವವಾಹಿನಿ ಮೂಡುಬಿದಿರೆ ಘಟಕದ ಸಂಘಟನಾ ನಿರ್ದೇಶಕ ಅಶೋಕ್, ಘಟಕದ ಕೋಶಾಧಿಕಾರಿ ಜಯಶೀಲಾ ಹಾಗೂ ತರಬೇತುದಾರರಾದ ಅನಿತ ಆನಂದ್ ಒಂಟಿಕಟ್ಟೆ ಉಪಸ್ಥಿತರಿದ್ದರು. ವೀಚೀಶ್ ಕೌಶಲ್ಯಪರ ತರಬೇತಿ ಕೇಂದ್ರದ ನಿರ್ದೇಶಕಿ ಶುಭಲಕ್ಷ್ಮಿ ಸ್ವಾಗತಿಸಿದರೆ, ಪವಿತ್ರ ಸರಸ್ವತಿ ನಿರೂಪಿಸಿದರು. ಈ ತರಬೇತಿ ಶಿಬಿರದಲ್ಲಿ ಒಟ್ಟು 27 ಮಹಿಳೆಯರು ಭಾಗವಹಿಸುತ್ತಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.