ಮೂಡುಬಿದಿರೆ: ಮಹಿಳೆಯರಿಗೆ ಇಷ್ಟವಾಗುವ ಸೀರೆಗಳು ಸೇರಿದಂತೆ ವಿವಿಧ ವಿನ್ಯಾಸದ ಉಡುಪುಗಳನ್ನು ಒಂದೇ ಕಡೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ‘ಜೀವೀಸ್ ಸಿಲ್ಕ್ & ಸೇಜ್’ ಮಹಿಳಾ ಉಡುಪುಗಳ ನೂತನ ಮಳಿಗೆ ಮೂಡುಬಿದಿರೆಯ ಆಳ್ವಾಸ್ ರಸ್ತೆಯ ಮಿನೇಜಸ್ ಕಾಂಪ್ಲೆಕ್ಸ್‌ನಲ್ಲಿ ಗುರುವಾರ ಶುಭಾರಂಭಗೊಂಡಿತು.
ಮಳಿಗೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಉದ್ಘಾಟಿಸಿ ಮಾತನಾಡಿ, ಮಹಿಳೆಯರಿಗೆ ಆಧುನಿಕ ಹಾಗೂ ಆಕರ್ಷಕ ವಿನ್ಯಾಸದ ಉಡುಪುಗಳು ಸುಲಭವಾಗಿ ದೊರೆಯುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನಿಶ್ಮಿತಾ ಸಂಸ್ಥೆಯ ಮುಖ್ಯಸ್ಥ ನಾರಾಯಣ ಪಿ.ಎಂ., ಮೀನಾಕ್ಷಿ ನಾರಾಯಣ್, ಡಾ. ಗ್ರೀಷ್ಮಾ ವಿವೇಕ್ ಆಳ್ವ, ವೈದ್ಯೆ ಡಾ. ಮಮತಾ ಗುರುಪ್ರಸಾದ್, ನ್ಯಾಯವಾದಿ ಶ್ವೇತಾ ಜೈನ್, ಗುರುನಾರಾಯಣ ಸ್ವಾಮಿ ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ದಿನೇಶ್, ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಶೆಟ್ಟಿ, ಕಾಳಿಕಾ ಡಿಜಿಟಲ್ಸ್ ಮಾಲಕಿ ಶಾಂತಲಾ ಸೀತಾರಾಮ ಆಚಾರ್ಯ, ಲಯನ್ ಜಗದೀಶ್ಚಂದ್ರ ಡಿ.ಕೆ., ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್, ಶಂಕರ್ ಕೋಟ್ಯಾನ್ ಮೂಡುಕೊಣಾಜೆ ಸೇರಿದಂತೆ ಹಲವರು ಭಾಗವಹಿಸಿ ಶುಭ ಹಾರೈಸಿದರು. ಸಂಸ್ಥೆಯ ಮಾಲಕಿ ಜೀವಿತಾ ಶಂಕರ್ ಹಾಗೂ ಶಂಕರ್ ಎ. ಕೋಟ್ಯಾನ್ ಅವರು ಅತಿಥಿಗಳನ್ನು ಸ್ವಾಗತಿಸಿ, ಸಂಸ್ಥೆಯ ಯಶಸ್ಸಿಗೆ ಸರ್ವರ ಸಹಕಾರ ಕೋರಿದರು.
ಪೂರ್ಣಿಮಾ ಕೋಟ್ಯಾನ್ ಮಾರ್ನಾಡ್ ಕಾರ್ಯಕ್ರಮ ನಿರೂಪಿಸಿದರು.