ಮೂಡುಬಿದಿರೆ: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನ್ಮದಿನದ ಪ್ರಯುಕ್ತ ಕಾಂಗ್ರೆಸ್ ಕಾನೂನು ವಿಭಾಗದ ವತಿಯಿಂದ ಆಲಂಗಾರಿನ ಮೌಂಟ್ ರೋಸರಿ ಆಶ್ರಮದ ನಿವಾಸಿಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಿಸಲಾಯಿತು. ಬಳಿಕ ಮಾತನಾಡಿದ ಮಿಥುನ್ ರೈ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಸ್ವಾರ್ಥ ಸೇವೆ ನೀಡುತ್ತಿರುವ ಸಂಸ್ಥೆಗಳಲ್ಲಿ ಆಲಂಗಾರಿನ ಮೌಂಟ್ ರೋಸರಿ ಆಶ್ರಮ ಪ್ರಮುಖವಾದುದು ಎಂದು ತಿಳಿಸಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಉತ್ತಮ ಆರೋಗ್ಯ ಲಭಿಸಲಿ ಹಾಗೂ ರಾಜಕೀಯ ಜೀವನದ ಉತ್ತುಂಗ ಶಿಖರಕ್ಕೇರಲು ಹಿರಿಯರ ಆಶೀರ್ವಾದ ಸದಾ ಇರಲಿ ಎಂದು ಆಶಿಸಿದರು. ಮುಂಬರುವ ದಿನಗಳಲ್ಲಿ ಅವರು ರಾಜ್ಯದ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್, ಸಿಸ್ಟರ್ ಪ್ರೆಸಿಲ್ಲಾ, ಬ್ಲಾಕ್ ವಕ್ತಾರ ರಾಜೇಶ್ ಕಡಲಕೆರೆ, ಪುರಸಭೆ ಮಾಜಿ ಸದಸ್ಯರಾದ ಪಿ.ಕೆ. ಥಾಮಸ್, ಪುರಂದರ ದೇವಾಡಿಗ, ಜೋಸ್ಸಿ ಮಿನೇಜಸ್, ಇಕ್ಬಾಲ್ ಕರೀಮ್ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳಾದ ಮರ್ವೀನ್ ಲೋಬೋ, ಅನೀಶ್ ಡಿಸೋಜ, ಪ್ರವೀಣ್ ಕುಮಾರ್, ಪ್ರವೀಣ್ ಪೂಜಾರಿ, ಚಂದ್ರಹಾಸ ಸನಿಲ್, ಶೇಖರ್ ಪೂಜಾರಿ, ಸಂತೋಷ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.