ಮೂಡುಬಿದಿರೆ: ಶನಿವಾರ ಸುರಿದ ಭಾರಿ ಗಾಳಿಮಳೆಗೆ ಇಲ್ಲಿನ ಬಸ್ ನಿಲ್ದಾಣದ ಆಟೋ ಪಾರ್ಕ್ - ಕಡಲ್ ಹೋಟೆಲ್ ಬಳಿ ಮರವೊಂದು ಉರುಳಿ ಬಿದ್ದಿದೆ. ಪರಿಣಾಮವಾಗಿ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಕೆಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಹಠಾತ್ ಬೀಸಿದ ಬಿರುಗಾಳಿ ಹಾಗೂ ಮಳೆಯ ಆರ್ಭಟಕ್ಕೆ ಮರ ಉರುಳಿದೆ. ವಾಹನ ಸವಾರರು ಆ ಸಮಯದಲ್ಲಿ ಸ್ಥಳದಲ್ಲಿ ಇಲ್ಲದಿದ್ದರಿಂದ ಪ್ರಾಣಾಪಾಯ ತಪ್ಪಿದೆ.
ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಗಾಳಿಮಳೆಗೆ ಮರ ಬಿದ್ದು ದ್ವಿಚಕ್ರವಾಹನಗಳು ಜಖಂ
ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ಗಾಳಿಮಳೆಗೆ ಮರ ಬಿದ್ದು ದ್ವಿಚಕ್ರವಾಹನಗಳು ಜಖಂ