ಮೂಡುಬಿದಿರೆ: ಶನಿವಾರ ಸಾಯಂಕಾಲ ಸುರಿದ ಭಾರಿ ಗಾಳಿ ಮಳೆಗೆ ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಳಿ ಬೃಹತ್ ಮರ ಬಿದ್ದು ಕೆಲವು ಗಂಟೆಗಳ ಕಾಲ ಮೂಡುಬಿದಿರೆ-ಬೆಳ್ಮಣ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಇದ್ದಕ್ಕಿದ್ದಂತೆ ಗಾಳಿಯ ವೇಗ ಹೆಚ್ಚಿದ್ದರಿಂದ ರಸ್ತೆ ಬದಿಯಲ್ಲಿದ್ದ ದೈತ್ಯ ಮರವು ಬೇರು ಸಮೇತ ರಸ್ತೆಯ ಮಧ್ಯಕ್ಕೆ ಧರಗುರುಳಿದೆ. ಈ ಮಾರ್ಗವು ಮುಖ್ಯ ಸಂಪರ್ಕ ರಸ್ತೆಯಾಗಿದ್ದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲವು ಗಂಟೆಗಳ ಕಾಲ ತೀವ್ರ ತೊಂದರೆ ಅನುಭವಿಸುವಂತಾಯಿತು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.