ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಡ್ಯಾರ್ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಅಡ್ಯಾರ್ ಶಾಖೆಯಲ್ಲಿ ಜರುಗಿತು.
ಸಂಘದ ಗ್ರಾಹಕರಾದ ಜಯಶೀಲ ಅಡ್ಯಂತಾಯ, ಉಮೇಶ್ ಶೆಟ್ಟಿ ಹಾಗೂ ಹರೀಶ್ ಅಡ್ಯಾರ್ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಘದ ಸದಸ್ಯರಾದ ಉಮೇಶ್ ಶೆಟ್ಟಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮೇಲುಸ್ತುವಾರಿಯಲ್ಲಿ ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುತ್ತಾ ಬರುತ್ತಿದೆ ಎಂದರು. ಸಂಘದ ಸದಸ್ಯರಾದ ಜಯಶೀಲ ಅಡ್ಯಂತಾಯ ಮಾತನಾಡಿ, ಸಂಘವು 35 ಶಾಖೆಗಳನ್ನು ಹೊಂದಿದ್ದು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಇನ್ನು ಮುಂದಕ್ಕೆ ಹೆಚ್ಚಿನ ಶಾಖೆಗಳನ್ನು ಹೊಂದಲಿ ಎಂದು ಶುಭ ಹಾರೈಸಿದರು. ಸದಸ್ಯರಾದ ಹರೀಶ್ ಅಡ್ಯಾರ್ ಮಾತನಾಡಿ, ಅಡ್ಯಾರು ಶಾಖೆಯು ಗ್ರಾಹಕರಿಗೆ ಉತ್ತಮ ಶಾಖೆಯಾಗಿದ್ದು, ಉತ್ತಮ ಸೇವೆಯನ್ನು ನೀಡುತ್ತಿದೆ ಎಂದು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಹೆಚ್ಚಿನ ಸಿಬ್ಬಂದಿಗಳು ಮಹಿಳೆಯರಾಗಿದ್ದು, ಗ್ರಾಹಕರ ಸಹಕಾರದಿಂದ ಈ ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರಲು ಸಾಧ್ಯವಾಗಿದೆ ಎಂದರು. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆಯನ್ನು ಹೆಚ್ಚಾಗಿ ನೀಡಲಾಗುತ್ತಿದೆ. ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಪರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅಡ್ಯಾರ್ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇಕಡಾ 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇಕಡಾ 10.50 ಅನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಮ್ಗೆ ಗರಿಷ್ಠ ಮೌಲ್ಯ 12,000 ರೂಪಾಯಿವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು. ಶಾಖೆಯ ಸಿಬ್ಬಂದಿಯಾದ ನವ್ಯ ಸ್ವಾಗತಿಸಿ, ಅಶ್ವಿನಿ ವಂದಿಸಿದರು. ಶಾಖೆಯ ಶಾಖಾಧಿಕಾರಿಯಾದ ಕವಿತಾ ಕಾರ್ಯಕ್ರಮ ನಿರೂಪಿಸಿದರು.