ಮೂಡುಬಿದಿರೆ: ಕಾರ್ಕಳ ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಕಲ್ಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಕಲ್ಲುಗಳು ರಸ್ತೆಯುದ್ದಕ್ಕೂ ಹರಡಿಕೊಂಡಿದ್ದು, ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಿರಂತರವಾಗಿ ಸರಣಿ ಅಪಘಾತಗಳು ಸಂಭವಿಸುತ್ತಲೇ ಇವೆ. ಈ ರಸ್ತೆ ಅಪಘಾತಗಳ ತಾಣವಾಗಿ ಮಾರ್ಪಡುತ್ತಿದ್ದರೂ ಸಂಬಂಧಪಟ್ಟವರು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಈ ಪ್ರದೇಶದಲ್ಲಿ ಪದೇ ಪದೇ ನಡೆಯುತ್ತಿರುವ ಅಪಘಾತಗಳ ಬಗ್ಗೆ ಸ್ಥಳೀಯರು ಹಾಗೂ ವಾಹನ ಸವಾರರು ಸ್ಥಳೀಯ ಶಾಸಕರು ಮತ್ತು ಸಂಸದರ ಗಮನಕ್ಕೆ ತಂದು ರಸ್ತೆ ದುರಸ್ತಿಗೆ ಆಗ್ರಹಿಸಿದ್ದರು. ಆದರೂ ಈ ಅಪಾಯಕಾರಿ ವಲಯದಲ್ಲಿ ಮತ್ತೊಮ್ಮೆ ಅಪಘಾತ ಸಂಭವಿಸಿರುವುದು ವಾಹನ ಸವಾರರನ್ನು ತೀವ್ರ ಆತಂಕಕ್ಕೆ ಈಡುಮಾಡಿದೆ. ಇನ್ನಾದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ರಸ್ತೆಯ ದೋಷಗಳನ್ನು ಸರಿಪಡಿಸಿ, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ವಿನಂತಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.