ಮೂಡುಬಿದಿರೆ: ಇಲ್ಲಿನ ಅಚ್ಚರಕಟ್ಟೆ ಪಡುಮಾರ್ನಾಡು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಸಂಪನ್ನಗೊಂಡಿತು. ಶಿಬಿರದಲ್ಲಿ ಒಟ್ಟು 38 ಮಕ್ಕಳು ಪಾಲ್ಗೊಂಡಿದ್ದರು. ಪಂಚಾಯತ್ ಆಡಳಿತಾಧಿಕಾರಿ ಡಾ.ಮಲ್ಲಿಕಾರ್ಜುನ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯಿಶ್ ಚೌಟ, ಅಚ್ಚರಕಟ್ಟೆ ಶಾಲೆಯ ಸ್ಥಾಪಕಾಧ್ಯಕ್ಷ, ಪಡುಮಾರ್ನಾಡು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಎಂ ದಯಾನಂದ ಪೈ, ಶಾಲಾ ಮುಖ್ಯ ಶಿಕ್ಷಕಿ ಶಕುಂತಲಾ ಶೆಟ್ಟಿ, ಶಿಕ್ಷಕಿ ನಾಗಶ್ರೀ, ರಾಜು ಮತ್ತು ಗ್ರಂಥಪಾಲಕಿ ವನಿತಾ ಉಪಸ್ಥಿತರಿದ್ದರು. ಮಕ್ಕಳೇ ನಿರ್ವಹಿಸಿದ ಈ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳು ಬೇಸಿಗೆ ಶಿಬಿರದ ಅನಿಸಿಕೆ ಹಂಚಿಕೊಂಡರು. ಮಾದಕ ದ್ರವ್ಯ ನಿರ್ಮೂಲನೆ ಬಗ್ಗೆ 'ಹಕ್ಕಿಯ ಹಾರಾಟ' ಸ್ಕಿಟ್, ಶಿಕ್ಷಣದ ಮಹತ್ವದ ಕುರಿತು ಸ್ಕಿಟ್ ಹಾಗೂ ಕೈಗಳ ಸ್ವಚ್ಛತೆಯನ್ನು ನೃತ್ಯರೂಪಕದ ಮೂಲಕ ಪ್ರದರ್ಶಿಸಿದರು. ನಂತರ ತುಳಸಿ ನೃತ್ಯ, ಹಾಡು, ಅಭಿನಯ ಗೀತೆ ಹಾಗೂ ಫ್ಯಾಷನ್ ಶೋ ನಡೆಯಿತು. ಫ್ಯಾಷನ್ ಶೋನಲ್ಲಿ ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಮಿಂಚಿದರು. ದಾನಿಗಳಿಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪ್ರಾರಂಭದಲ್ಲಿ ಪ್ರತೀಕ್ಷಾ ಸ್ವಾಗತಿಸಿದರು. ತನ್ವಿ ಕಾರ್ಯಕ್ರಮ ನಿರೂಪಿಸಿದರು. ಮೋಕ್ಷ ವಂದಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.