ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್ಶಿಪ್ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಶನಿವಾರ ಸಾಯಂಕಾಲ ಆರಂಭಗೊoಡಿತು. ಮಹಿಳೆಯರ ವಿಭಾಗದ ಪಂದ್ಯಾಟವನ್ನು ವಕೀಲೆ ಶ್ವೇತಾ ಜೈನ್ ಉದ್ಘಾಟಿಸಿ, ಮಹಿಳೆಯರು ಪುರುಷರಿಗೆ ಸಮಾನವಾಗಿ ಎಲ್ಲಾ ಕಡೆಗಳಲ್ಲೂ ಇದ್ದಾರೆ. ಭಾರತದ ವಾಲಿಬಾಲ್ ತಂಡವು ದಕ್ಷಿಣ ಭಾರತಕ್ಕೆ ಹೋಲಿಸಿದರೆ ಬಲಿಷ್ಠವಾದ ತಂಡವಾಗಿದೆ ಆದರೆ ಜಪಾನ್, ಚೀನಾ ಮತ್ತು ಕೊರಿಯಾ ತಂಡಗಳಿಗೆ ಹೋಲಿಸಿದರೆ ನಮ್ಮ ದೇಶದ ಮಹಿಳಾ ತಂಡಗಳಿಗೆ ಹೆಚ್ಚಿನ ತರಬೇತಿಯ ಅವಶ್ಯಕತೆಯಿದೆ ಎಂದೆನಿಸುತ್ತದೆ ಎಂದರು. ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಸ್ ಸತೀಶ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಮೂಡಾ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್ ಅಂಕಣ ಉದ್ಘಾಟಿಸಿದರು. ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಡಾ.ವಿನಯ್ ಆಳ್ವ, ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಶೆಟ್ಪಿ, ಉದ್ಯಮಿ ಜಾವೆದ್ ಶೇಕ್ ಭಾಗವಹಿಸಲಿದ್ದಾರೆ. ನಾಗೇಶ್ ಎಸ್ ಸ್ವಾಗತಿಸಿದರು. ಜಿಲ್ಲಾ ಅಸೋಸಿಯೇಷನ್ ಕಾರ್ಯದರ್ಶಿ ಶಂಕರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಳ್ವಾಸ್ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಪ್ರಮೋದ್ ಕಾರ್ಯಕ್ರಮ ನಿರೂಪಿಸಿದರು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.