ಮೂಡುಬಿದಿರೆ: ಇಲ್ಲಿನ ಕೇರ್ ಚಾರಿಟಬಲ್ ಟ್ರಸ್ಟ್ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಮೇ 31ರಂದು ಮಧ್ಯಾಹ್ನ 2 ಗಂಟೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಸಮಾಜ ಸೇವೆಗಾಗಿ ರೂಪುಗೊಂಡ ಟ್ರಸ್ಟ್, ತನ್ನ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ಮೂಡುಬಿದಿರೆ ಪರಿಸರದ 500 ಬಡ ಶಾಲಾ ವಿದ್ಯಾರ್ಥಿಗಳಿಗೆ ವರ್ಷ ಪೂರ್ತಿ ಬೇಕಾಗುವ ಪುಸ್ತಕಗಳನ್ನು ಹಾಗೂ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಲಿದೆ. ಸಮಾಜ ಮಂದಿರದಲ್ಲಿ ನಡೆಯಲಿರುವ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಮಾಜದಲ್ಲಿ ತೆರೆಮರೆಯಲ್ಲಿ ಸದ್ದಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಟ್ರಸ್ಟ್ ಸ್ಥಾಪಕ ಅನಿಲ್ ಮೆಂಡೋನ್ಸಾ ತಿಳಿಸಿದ್ದಾರೆ.