ಮೂಡುಬಿದಿರೆ: ಪುರಸಭಾ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣಾ ನಿಯಮ 2026ನ್ನು ಕಳೆದ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ. ಈ ನಿಯಮದಡಿ ಪುರಸಭೆ ವ್ಯಾಪ್ತಿಯ ಮನೆಗಳು ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಮೂಲದಲ್ಲಿಯೇ ತ್ಯಾಜ್ಯವನ್ನು ವಿಂಗಡಿಸುವುದನ್ನು ಪುರಸಭೆಯು ಕಡ್ಡಾಯಗೊಳಿಸಿದೆ. ಸಾರ್ವಜನಿಕರು ತಮ್ಮಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ಕಾಳಜಿ ತ್ಯಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಬೇಕಿದೆ. ಪೈಂಟ್ ಡ್ರಮ್ಗಳು, ಕೀಟನಾಶಕ ಕ್ಯಾನ್ ಅಥವಾ ಬಾಟಲಿಗಳು, ಸಿ.ಎಫ್.ಸಿ ಬಲ್ಬ್ಗಳು, ಅವಧಿ ಮೀರಿದ ಔಷಧಿಗಳು, ನಿರುಪಯುಕ್ತ ಸೂಜಿಗಳು, ಸಿರಿಂಜುಗಳು ಮತ್ತು ಕಲುಷಿತ ಮಾಪಕಗಳನ್ನು ವಿಶೇಷ ಕಾಳಜಿ ತ್ಯಾಜ್ಯದ ಅಡಿಯಲ್ಲಿ ಪ್ರತ್ಯೇಕವಾಗಿ ಸಂಗ್ರಹಿಸಬೇಕು. ಸಾರ್ವಜನಿಕರು ಈ ರೀತಿಯಾಗಿ ತ್ಯಾಜ್ಯವನ್ನು ವಿಭಾಗವಾರು ವಿಂಗಡಿಸಿ ಪುರಸಭೆಯ ಕಸದ ವಾಹನಕ್ಕೆ ಹಸ್ತಾಂತರಿಸಬೇಕು ಎಂದು ಪುರಸಭಾ ಮುಖ್ಯಾಧಿಕಾರಿ ಇಂದು.ಎಂ ಪ್ರಕಟಣೆಯಲ್ಲಿ ತಿಳಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.