ಮೂಡುಬಿದಿರೆ:ತಾಲೂಕಿನ 12 ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕುಟುಂಬದ ಉದ್ಯೋಗ ಚೀಟಿ ಹೊಂದಿರುವ ಫಲಾನುಭವಿಗಳಿಗಾಗಿ ಮುಂದಿನ ವಾರದಿಂದ ವಿಶೇಷ ಗ್ರಾಮಸಭೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಗಳಲ್ಲಿ ಉದ್ಯೋಗ ಚೀಟಿ ಹೊಂದಿರುವ ಕುಟುಂಬಸ್ಥರು ಕಡ್ಡಾಯವಾಗಿ ಭಾಗವಹಿಸಿ E-KYC ದೃಢೀಕರಣವನ್ನು ಮಾಡಿಸಿಕೊಳ್ಳಬೇಕೆಂದು ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಸರ್ಕಾರದ ಇತ್ತೀಚಿನ ಆದೇಶದಂತೆ, E-KYC ದೃಢೀಕರಣ ಮಾಡಿಕೊಳ್ಳದ ಫಲಾನುಭವಿಗಳಿಗೆ ನರೇಗಾ ಯೋಜನೆಯಡಿ ಲಭ್ಯವಿರುವ ಯಾವುದೇ ಸೌಲಭ್ಯಗಳು ದೊರೆಯುವುದಿಲ್ಲ. ಒಂದು ವೇಳೆ E-KYC ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಅಂತಹ ಉದ್ಯೋಗ ಚೀಟಿಗಳು ರದ್ದಾಗಲಿದ್ದು, ಒಮ್ಮೆ ರದ್ದಾದ ಚೀಟಿಯನ್ನು ಭವಿಷ್ಯದಲ್ಲಿ ಪುನರ್ ಸ್ಥಾಪಿಸಲು ಅವಕಾಶವಿರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ ಎಲ್ಲಾ ಸಾರ್ವಜನಿಕರು ಆಯಾ ಗ್ರಾಮ ಪಂಚಾಯತ್ಗಳಲ್ಲಿ ನಿಗದಿಪಡಿಸಿದ ದಿನಾಂಕದಂದು ತಪ್ಪದೆ ಹಾಜರಾಗಿ E-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೋರಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.