ಮೂಡುಬಿದಿರೆ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವತಿಯಿಂದ ಯೋಗ ಮಹೋತ್ಸವ ಕಾರ್ಯಕ್ರಮವನ್ನು ಮೇ 23ರಂದು ಮಿಜಾರಿನ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ. ಭಾರತ ಸರ್ಕಾರದ ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ ಎಂಬ ಮಹತ್ವದ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಯೋಗದ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ಕಾರ್ಯಕ್ರಮದಲ್ಲಿ ಸುಮಾರು 500ಕ್ಕೂ ಹೆಚ್ಚು ಯೋಗಾಸಕ್ತರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ. ಆಳ್ವಾ ಫಾರ್ಮಸಿಯ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಯೋಗಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಕೋರಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.