ಮೂಡುಬಿದಿರೆ:ಇಲ್ಲಿನ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮೂಡುಬಿದಿರೆ ಪ್ರೆಸ್ ಕ್ಲಬ್ ನಿರ್ಮಿಸುತ್ತಿರುವ ನೂತನ ಪತ್ರಿಕಾ ಭವನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ 25 ಲಕ್ಷ ರೂಪಾಯಿ ಅನುದಾನ ಮಂಜೂರಾತಿಗೆ ಆದೇಶ ನೀಡಿದ್ದಾರೆ. ಪೇಟೆಗೆ ಹೃದಯ ಭಾಗದಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪತ್ರಿಕಾ ಭವನ ನಿರ್ಮಾಣಗೊಳ್ಳುತ್ತಿದೆ. ಇದಕ್ಕೆ ವಿಶೇಷ ಅನುದಾನ ಒದಗಿಸುವಂತೆ ಮೂಡುಬಿದಿರೆ ಪ್ರೆಸ್‌ಕ್ಲಬ್ ನಿಯೋಗವು ಜನವರಿಯಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮೂಲಕ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು, ವಾರ್ತಾ ಮತ್ತು ಪ್ರಚಾರ ನಿರ್ದೇಶನಾಲಯಕ್ಕೆ ಒದಗಿಸಲಾದ ಅನುದಾನದಿಂದ ಪತ್ರಿಕಾ ಭವನ ನಿರ್ಮಾಣಕ್ಕೆ ಹಣ ಮಂಜೂರು ಮಾಡುವಂತೆ ಆಡಳಿತ ಇಲಾಖೆಗೆ ಆದೇಶ ನೀಡಿದ್ದಾರೆ ಎಂದು ಮೂಡುಬಿದಿರೆ ಪ್ರೆಸ್‌ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂಡುಬಿದಿರೆ ಪತ್ರಿಕಾ ಭವನಕ್ಕೆ 25 ಲಕ್ಷ ರೂಪಾಯಿ ಅನುದಾನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ
ಮೂಡುಬಿದಿರೆ ಪತ್ರಿಕಾ ಭವನಕ್ಕೆ 25 ಲಕ್ಷ ರೂಪಾಯಿ ಅನುದಾನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ