ಮೂಡುಬಿದಿರೆ: ಬನ್ನಡ್ಕ ರಸ್ತೆಯಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಸರಣಿ ಅಪಘಾತಗಳನ್ನು ಖಂಡಿಸಿ ಮತ್ತು ತಕ್ಷಣವೇ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ ಮೇ 31ರಂದು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ನಾಗರಿಕ ವೇದಿಕೆ ಬನ್ನಡ್ಕ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಈ ರಸ್ತೆಯಲ್ಲಿ ಒಟ್ಟು 25 ಭೀಕರ ಅಪಘಾತಗಳು ಸಂಭವಿಸಿದ್ದು, 9 ಮಂದಿ ಜೀವ ಕಳೆದುಕೊಂಡಿದ್ದಾರೆ. ಹಲವಾರು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಪ್ರಾಣ ಹೋಗುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ನಿರ್ಲಕ್ಷ್ಯ ಬಿಟ್ಟು ಸುರಕ್ಷತೆ ನೀಡಿ, ಜನರ ಜೀವ ಅತ್ಯಂತ ಮೌಲ್ಯಯುತವಾದುದು ಎಂಬ ಘೋಷಣೆಗಳೊಂದಿಗೆ ಬನ್ನಡ್ಕ ದೈವಸ್ಥಾನದ ಬಳಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.