ಮೂಡುಬಿದಿರೆ: ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷರು ಯಾವುದೇ ಕಾರ್ಯನಿರ್ವಹಿಸದೆ ಅಕ್ರಮ ಅರ್ಜಿದಾರರನ್ನು ಹಾಗೂ ರೈತರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಅಕ್ರಮ ಸಕ್ರಮ ಸಮಿತಿ ಸದಸ್ಯ ಮಿತ್ತಬೈಲು ವಾಸುದೇವ ನಾಯಕ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರವು 2023 ರಲ್ಲಿ ಮೂಡುಬಿದಿರೆ ಅಕ್ರಮ ಸಕ್ರಮ ಸಮಿತಿಯನ್ನು ನೇಮಿಸಿದ್ದು, ಪ್ರಸ್ತುತ ಸರ್ಕಾರದ ನಿಯಮದಂತೆ ಮಾನ್ಯ ಶಾಸಕರು ಇದರ ಅಧ್ಯಕ್ಷರಾಗಿದ್ದಾರೆ. ಸಮಿತಿಯು ಯಾವುದೇ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಈ ಬಗ್ಗೆ ರಾಜಕಾರಣ ಮಾಡಲಾಗುತ್ತಿದೆ ಎಂದು ಈ ಹಿಂದೆಯೂ ಪತ್ರಿಕಾ ಹೇಳಿಕೆ ನೀಡಲಾಗಿತ್ತು. ಕೃಷಿ ಭೂಮಿಯಲ್ಲಿ ಅಕ್ರಮವಾಗಿ ಕೃಷಿ ಚಟುವಟಿಕೆ ನಡೆಸುತ್ತಿರುವ ಕೃಷಿಕರಿಗೆ ಆದಷ್ಟು ಬೇಗ ಅಕ್ರಮ ಸಕ್ರಮ ಸಮಿತಿಯ ಸಭೆ ಕರೆದು ಮೂಡುಬಿದಿರೆ ತಾಲೂಕಿನ ಸಂಬಂಧಪಟ್ಟ ಅರ್ಜಿಗಳನ್ನು ವಿಲೇವಾರಿ ಮಾಡಬೇಕೆಂದು ತಹಶೀಲ್ದಾರರು ಮತ್ತು ಜಿಲ್ಲಾಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಆದರೂ ಶಾಸಕರು ಯಾವುದೇ ಮುತುವರ್ಜಿ ತೋರಿಸಿಲ್ಲ. ಮನವಿ ಮಾಡಿ ಒಂದು ವರ್ಷ ಕಳೆದರೂ ಯಾವುದೇ ಸಭೆ ನಡೆಸದೆ ಮೂಡುಬಿದಿರೆ ತಾಲೂಕಿನ ರೈತರಿಗೆ ಅನ್ಯಾಯವೆಸಗಲಾಗಿದೆ ಎಂದು ಅವರು ದೂರಿದ್ದಾರೆ. ಶಾಸಕರಿಗೆ ಈ ಹಿಂದಿನ ಅವಧಿಯಲ್ಲಿಯೂ ರೈತರಿಗೆ ಸಾಗುವಳಿ ಚೀಟಿ ನೀಡುವ ಅವಕಾಶವಿದ್ದರೂ ಮೂಡುಬಿದಿರೆ ತಾಲೂಕಿನ ಸಂಬಂಧಪಟ್ಟ 57 ಮತ್ತು 53 ರ ಅರ್ಜಿಗಳನ್ನು ಬಾಕಿ ಇರಿಸಿದ್ದು ಯಾವುದೇ ಆಸಕ್ತಿ ತೋರಿಸಿಲ್ಲ. ಶಾಸಕರು ಮೊದಲು ಅಕ್ರಮ ಸಕ್ರಮ ಸಮಿತಿಯನ್ನು ನಡೆಸಿ ನ್ಯಾಯುತವಾಗಿ ರೈತರಿಗೆ ನ್ಯಾಯ ಒದಗಿಸಬೇಕು. ಈ ನಿಟ್ಟಿನಲ್ಲಿ ಸರಿಯಾಗಿ ಸ್ಪಂದಿಸದಿದ್ದರೆ ರೈತರನ್ನು ಒಟ್ಟುಸೇರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಅಕ್ರಮ ಸಮಿತಿ ಸದಸ್ಯರಾದ ಮೆರಿಟಾ ಮೆನೇಜಸ್, ಕರುಣಾಕರ ತೋಡಾರು ಸುದ್ದಿಗೋಷ್ಠಿಯಲ್ಲಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.