ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮೇ 29ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ರಂಗಾಯಣ ಶಿವಮೊಗ್ಗ ತಂಡದಿಂದ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನ ನಡೆಯಲಿದೆ. ನೀನಾಸಂ ನಟರಾಜ ಹೊನ್ನವಳ್ಳಿ ನಿರ್ದೇಶಿಸಿರುವ ಈ ನಾಟಕವು ಬೊಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿಯನ್ನು ಆಧರಿಸಿದ್ದು, ದೇಶ ವಿಭಜನೆಯ ಸಂದರ್ಭದ ನಿರಾಶ್ರಿತ ಜೀವನ, ಮಾನವೀಯ ಸಂಬಂಧಗಳು ಹಾಗೂ ಸಾಮರಸ್ಯದ ಸಂದೇಶವನ್ನು ಬಿಂಬಿಸುತ್ತದೆ. ಕವ್ವಾಲಿ, ಗಝಲ್ ಸೇರಿದಂತೆ ಭಾರತೀಯ ಸಂಗೀತ ಅಂಶಗಳನ್ನು ಒಳಗೊಂಡ ಈ ಮೂರು ಗಂಟೆಗಳ ನಾಟಕ ಪ್ರೇಕ್ಷಕರಿಗೆ ವಿಶೇಷ ಅನುಭವ ನೀಡಲಿದೆ. ಪ್ರವೇಶ ಉಚಿತವಾಗಿದ್ದು, ಯಾವುದೇ ಸಭಾ ಕಾರ್ಯಕ್ರಮವಿಲ್ಲದೆ ನಾಟಕ ನಿಗದಿತ ವೇಳೆಗೆ ಆರಂಭವಾಗಲಿದೆ ಎಂದು ಡಾ. ಎಂ. ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.