ಮೂಡುಬಿದಿರೆ: ಪರಿಸರದ ವಿವಿಧೆಡೆ ಬಕ್ರೀದ್ ಹಬ್ಬವನ್ನು ಸಡಗರ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಾಲ್ಪಾಡಿಯ ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಜರಗಿತು. ಪ್ರಾರ್ಥನೆಯಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಸೀದಿ ಖತೀಬರಾದ ಹಮೀದ್ ದಾರಿಮಿ ಈದ್ ಸಂದೇಶ ನೀಡಿದರು. ಹಬ್ಬವು ಸೌಹಾರ್ದತೆ ಮತ್ತು ತ್ಯಾಗದ ಪ್ರತೀಕವಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಸೀದಿ ಕಮಿಟಿ ಅಧ್ಯಕ್ಷ ಶರೀಫ್ ಎಂ.ಎಂ, ಕಾರ್ಯದರ್ಶಿ ಝಕರಿಯಾ ಯೂಸುಫ್ ಹಾಗೂ ಮಸೀದಿ ಕಮಿಟಿಯ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.