ಮೂಡುಬಿದಿರೆ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾ ಗಿರಿ ಕಡಂದಲೆಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ತಂಡದ ವತಿಯಿಂದ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು. ಪುಸ್ತಕ ವಿತರಣೆ ಮಾಡಿ ಮಾತನಾಡಿದ ಸುನಿಲ್ ಮೆಂಡೋನ್ಸ, ಶಾಲೆ ಕಲಿಯುವ ಮಕ್ಕಳು ಹಗಲು ಕನಸು ಕಾಣಬೇಕು. ಮುಂದೆ ನಾವು ಯಾವ ಗುರಿಯನ್ನು ಸಾಧಿಸಬೇಕು ಎಂದು ಚಿಕ್ಕ ವಯಸ್ಸಿನಲ್ಲಿಯೇ ಯೋಚನೆ ಮಾಡಿದರೆ ದೊಡ್ಡ ಸಾಧನೆ ಮಾಡಲು ಸಾಧ್ಯವಾಗುತ್ತದೆ. ನಾನು ಸಹ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತು ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದರು. ನಮಗೆ ಮೊದಲ ಗುರುಗಳು ತಂದೆ ತಾಯಿ. ಆದರೆ ನಮಗೆ ವಿದ್ಯೆ, ಬುದ್ಧಿ ಕಲಿಸುವ ಗುರುಗಳು ಕೇವಲ ಪಾಠ ಹೇಳುವವರಲ್ಲ, ಅವರು ನಮ್ಮ ಜೀವನಕ್ಕೆ ರೂಪ ಕೊಡುವ ಶಿಲ್ಪಿಗಳು. ನಮ್ಮ ಯಶಸ್ಸು ಕಂಡು ಹೆಮ್ಮೆಪಡುವವರು ಮತ್ತು ನಮ್ಮ ನೋವನ್ನು ತಮ್ಮದಾಗಿಸಿಕೊಳ್ಳುವವರು ಗುರುಗಳಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು. ಲಯನ್ಸ್ ಕ್ಲಬ್ ಅಲಂಗಾರ್ ಅಧ್ಯಕ್ಷ ಅಮಿತ್ ಡಿಸಿಲ್ವ, ಡೈನಾ ಸೇರವೋ, ಮುಖ್ಯ ಶಿಕ್ಷಕಿ ಪ್ರತಿಭಾ ಪಿ.ಎಂ, ಎಸ್.ಡಿ.ಎಂ.ಸಿ. ಅಧ್ಯಕ್ಷ ಸೀತಾರಾಮ ಸಾಲ್ಯಾನ್, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಪ್ರಣೀತ ನಾಗೇಶ್, ಅಂಗನವಾಡಿ ಕಾರ್ಯಕರ್ತೆ ಬೆನಡಿಕ್ಟ ದಾಂತೀಶ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಸಾಲ್ಯಾನ್, ಪೋಷಕರು ಉಪಸ್ಥಿತರಿದ್ದರು. ಸಹಶಿಕ್ಷಕಿ ಪೌಲಿನ್ ಪಿಂಟೋ ಸ್ವಾಗತಿಸಿದರು. ಸುಮನಾ ಎಚ್. ಎಸ್. ಅತಿಥಿಗಳನ್ನು ಗೌರವಿಸಿದರು ಮತ್ತು ಸತೀಶ್ ಶೆಟ್ಟಿ ವಂದಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.