ಮೂಡುಬಿದಿರೆ: ಇಲ್ಲಿನ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಶಿಕ್ಷಣ ತಜ್ಞ ಪುಷ್ಪರಾಜ್ ಬಿ. ಅಧಿಕಾರ ಸ್ವೀಕರಿಸಿದ್ದಾರೆ. ಪ್ರಸ್ತುತ ಇದೇ ಸಂಸ್ಥೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಷ್ಪರಾಜ್ ಬಿ. ವಿವಿಧ ಶಿಕ್ಷಣ ಸಂಸ್ಥೆಗಳ ವಿವಿಧ ಹುದ್ದೆಗಳಲ್ಲಿ 30 ವರ್ಷಗಳ ಸುದೀರ್ಘ ಬೋಧನಾ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಆಪ್ತಸಮಾಲೋಚಕರು, ತರಬೇತುದಾರರು ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡಿರುವ ಇವರು, ತಮ್ಮ ವೃತ್ತಿಜೀವನದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕಾ ವಿಧಾನಗಳ ಕುರಿತು ತರಬೇತಿ ನೀಡಿದ್ದಾರೆ. ಇದರೊಂದಿಗೆ ರಾಜ್ಯದಾದ್ಯಂತ ವಿವಿಧ ಕಾಲೇಜುಗಳ 20,000 ಕ್ಕೂ ಹೆಚ್ಚು ಶಿಕ್ಷಕರಿಗೆ ತರಗತಿ ನಿರ್ವಹಣೆ ಕುರಿತು ವಿಶೇಷ ಕಾರ್ಯಾಗಾರ ಹಾಗೂ ತರಬೇತಿ ನಡೆಸಿಕೊಟ್ಟಿದ್ದಾರೆ. ಪುಷ್ಪರಾಜ್ ಬಿ. ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್ ಅಭಿನಂದನೆ ಸಲ್ಲಿಸಿದ್ದಾರೆ. ಇವರ ಸಮರ್ಥ ನಾಯಕತ್ವದಲ್ಲಿ ಕಾಲೇಜು ಶೈಕ್ಷಣಿಕವಾಗಿ ಮತ್ತಷ್ಟು ಉನ್ನತ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಆಡಳಿತ ನಿರ್ದೇಶಕ ಸಂಪತ್ ಕುಮಾರ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ನೂತನ ಪ್ರಾಂಶುಪಾಲರನ್ನು ಗೌರವಿಸಿ, ಶುಭ ಹಾರೈಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.