ಮೂಡುಬಿದಿರೆ: ಪುತ್ತಿಗೆಯ ಸೋಮನಾಥೇಶ್ವರ ದೇವಸ್ಥಾನದ ಸಮೀಪದ ಗುರು ರಾಘವೇಂದ್ರ ಸ್ವಾಮಿ ಮಂದಿರದಲ್ಲಿ ಗುರುವಾರ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ನೆರವೇರಿತು. ಬೆಳಗ್ಗಿನಿಂದಲೇ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗಣಹೋಮ, ನವಕಲಶ, ಪ್ರಧಾನ ಹೋಮ, ಕಲಶಾಭಿಷೇಕ ಹಾಗೂ ಅಲಂಕಾರ ಪೂಜೆಗಳು ವೈದಿಕ ವಿಧಿವಿಧಾನಗಳೊಂದಿಗೆ ನಡೆದವು. ಬಳಿಕ ಮಹಾಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ ನಡೆದ ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಉತ್ಸವದ ವಿಶೇಷ ಆಕರ್ಷಣೆಯಾಗಿ ಬೆಳಿಗ್ಗೆಯಿಂದ ರಾತ್ರಿಯವರೆಗೆ ನಿರಂತರ ಭಜನಾ ಸಂಕೀರ್ತನೆ ನಡೆಯಿತು. ವಿವಿಧ ಭಜನಾ ಮಂಡಳಿಗಳು ಭಜನೆ ಪ್ರಸ್ತುತಪಡಿಸಿದರು. ರಾಘವೇಂದ್ರ ಸ್ವಾಮಿಯ ಪ್ರತಿಮೆಗೆ ಬಂಗಾರದ ಕವಚವನ್ನು ಕಿಶೋರ್ ಕೋಟ್ಯಾನ್ ಕುಟುಂಬಸ್ಥರು ಸಮರ್ಪಸಿದರು. ಸಂಜೆ ನಿತ್ಯಪೂಜೆ, ರಂಗಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು. ಶಾಸಕ ಉಮಾನಾಥ್ ಕೋಟ್ಯಾನ್ , ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಬಾಹುಬಲಿ ಪ್ರಸಾದ್ , ಚಂದ್ರಹಾಸ ಸನಿಲ್, ಪ್ರಮುಖರಾದ ಭಾರತಿ ಕಿಶೋರ್ ಕೋಟ್ಯಾನ್ , ರಾಮದಾಸ್ ಕೋಟ್ಯಾನ್, ಸತೀಶ್ ಬಂಗೇರ, ರಾಜೇಂದ್ರ ಸಾಲ್ಯಾನ್, ಶಶಿಧರ್ ಎಸ್ ಅಂಚನ್ ಎಂಕ್ರಿಪಲ್ಲ ಪ್ರಮುಖರಾಗಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.