ಮೂಡುಬಿದಿರೆ: ಇರುವೈಲು-ಪುಚ್ಚಮೊಗರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣಾ ಸಮಾರಂಭ ಹಾಗೂ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ ಅವರ ಷಷ್ಠಿ ಪೂರ್ತಿ ಸಂಭ್ರಮ ಕಾರ್ಯಕ್ರಮವು ಮೇ 31ರಂದು ಹಮ್ಮಿಕೊಳ್ಳಲಾಗಿದೆ. ಇರುವೈಲು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಈ ಸಭಾ ಕಾರ್ಯಕ್ರಮ ನಡೆಯಲಿದೆ.

ಆರ್ಯ ಈಡಿಗ ಮಹಾಸಂಸ್ಥಾನ ಸೊಲೂರು ಮಠದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ ಕಾರ್ಯಕ್ರಮದ ಆಶೀರ್ವಚನ ನೀಡಲಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘದ ಅಧ್ಯಕ್ಷ ಕುಮಾರ್ ಪೂಜಾರಿ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಬಿ. ತಾರಾನಾಥ ಪೂಜಾರಿ, ಇರುವೈಲು ಉದ್ಯಮಿ ಸತೀಶ್ಚಂದ್ರ ಸಾಲ್ಯಾನ್ ಪಾಣಿಲ , ಇರುವೈಲು ಕ್ಷೇತ್ರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷೆ ಸುಜಾತ ಜೆ. ಶೆಟ್ಟಿ, ಗುಜರಾತ್ ಸಿಲಾಸ್ ಎಸ್‌ಡಿಎಚ್‌ಎಸ್ ಗ್ರೂಪ್ ಆಫ್ ಕಂಪೆನಿಸ್ ಚೇರ್ಮನ್ ವೆಂಕಟೇಶ್ ಎಸ್. ಪೂಜಾರಿ ಕಾಂಪೆಟ್ಟು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನೇಮಕಗೊಂಡಿರುವ ಇರುವೈಲು ತಾರಾನಾಥ ಪೂಜಾರಿ ಅವರನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಹಿಳಾ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.