ಮೂಡುಬಿದಿರೆ: ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಕೇಶವ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸುಧಾಕರ ಪೂಜಾರಿ ಆಯ್ಕೆಯಾಗಿದ್ದಾರೆ. ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಹತ್ತು ಮಂದಿ ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಅಭ್ಯರ್ಥಿಗಳು ಜಯಗಳಿಸಿದ್ದರು. ಆಡಳಿತ ಮಂಡಳಿಯ ಬಹುಮತ ಹೊಂದಿದ್ದ ಬಿಜೆಪಿ ಮುಖಂಡರ ತೀರ್ಮಾನದ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ವಿದ್ಯಾನಂದ ಶೆಟ್ಟಿ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕೇಶವ ಪೂಜಾರಿ ಕೂಡಾ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದಾಗಿ ಆಂತರಿಕ ಪೈಪೋಟಿ ಏರ್ಪಟ್ಟಿತ್ತು. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದ ಹಿನ್ನೆಲೆಯಲ್ಲಿ ಸಂಘದ ನಿಯಮಾವಳಿಗಳ ಪ್ರಕಾರ ಗುಪ್ತ ಮತದಾನ ಪ್ರಕ್ರಿಯೆಯನ್ನು ನಡೆಸಲಾಯಿತು. ಈ ಮತದಾನದಲ್ಲಿ ಕೇಶವ ಪೂಜಾರಿ ಅವರು ಸ್ಪರ್ಧಾತ್ಮಕ ಮತಗಳನ್ನು ಗಳಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಸುಧಾಕರ ಪೂಜಾರಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.