ಮೂಡುಬಿದಿರೆ: ಮಕ್ಕಳಿಗೆ ಬಾಲ್ಯದಲ್ಲಿಯೇ ಬದುಕಿನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉತ್ತಮ ಶಿಕ್ಷಣ ನೀಡಿದರೆ ಮುಂದೆ ಸಮಾಜವು ಸಾಮರಸ್ಯದಿಂದ ಇರಲು ಸಾಧ್ಯವಾಗುತ್ತದೆ ಎಂದು ಪಾಲಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಜಗದೀಶ್ ಕೋಟ್ಯಾನ್ ಹೇಳಿದರು. ಕಡಂದಲೆ ವಿದ್ಯಾಗಿರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಹೊಸ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಸಮರ್ಥ ಹಾಗೂ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬುದನ್ನು ಪೋಷಕರು ಅರಿಯುವುದು ಮುಖ್ಯವಾಗಿದೆ. ಮಳೆಗಾಲದ ಅವಧಿಯಲ್ಲಿ ಪೋಷಕರು ಮಕ್ಕಳ ಸುರಕ್ಷತೆ ಮತ್ತು ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು. ಮಕ್ಕಳನ್ನು ಧನಾತ್ಮಕ ಚಿಂತನೆಗಳೊಂದಿಗೆ ಸೂಕ್ಷ್ಮತೆಯಿಂದ ಬೆಳೆಸಬೇಕೇ ಹೊರತು, ನಕಾರಾತ್ಮಕವಾಗಿ ಬೆಳೆಸಬಾರದು ಎಂದು ಅವರು ಪೋಷಕರಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಎಸ್‍ಡಿಎಂಸಿ ಅಧ್ಯಕ್ಷ ಸೀತಾರಾಮ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಎಸ್‍ಡಿಎಂಸಿ ಉಪಾಧ್ಯಕ್ಷೆ ಪ್ರಣೀತಾ ಪೂಜಾರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ ಪೂಪಾಡಿಕಲ್ಲು, ಮುಖ್ಯ ಶಿಕ್ಷಕಿ ಪ್ರತಿಭಾ ಎಂ.ಪಿ, ಶಿಕ್ಷಕರಾದ ಸತೀಶ್ ಶೆಟ್ಟಿ, ಪೌಲಿನ್ ಪಿಂಟೋ, ಸುಮನಾ ಎಚ್.ಸಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಬೆನಡಿಕ್ಟಾ ದಾಂತಿಸ್ ಮತ್ತು ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರತಿಭಾ ಎಂ.ಪಿ ಸ್ವಾಗತಿಸಿ, ಶಿಕ್ಷಕ ಸತೀಶ್ ಶೆಟ್ಟಿ ವಂದಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.