ಮೂಡುಬಿದಿರೆ: ಇಲ್ಲಿನ ಕೆಸರಗದ್ದೆಯ ಶ್ರೀ ರಾಮಮಂದಿರದಲ್ಲಿ ಮೇ 31 ರಂದು ಅಧಿಕ ಮಾಸದ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು. ಪೂರ್ವಾಹ್ನದಿಂದಲೇ ಆರಂಭಗೊಂಡ ಧಾರ್ಮಿಕ ವಿಧಿವಿಧಾನಗಳಲ್ಲಿ ವ್ಯಾಸೋಪಾಸನೆ, ಭಜನೆ ಸಹಿತ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ರಾಮಚಂದ್ರ ದೇವರಿಗೆ ವಿಶೇಷ ಹೂವಿನ ಪೂಜೆಯನ್ನು ನೆರವೇರಿಸಲಾಯಿತು. ವೈದಿಕ ವಿಧಿವಿಧಾನಗಳನ್ನು ವೇದಮೂರ್ತಿ ಪದ್ಮನಾಭ ಭಟ್ ಮತ್ತು ಸುರೇಂದ್ರ ಭಟ್ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆಸಿಕೊಡಲಾಯಿತು. ಇದೇ ಸಂದರ್ಭದಲ್ಲಿ ವೇದಮೂರ್ತಿ ಹರಿಪ್ರಸಾದ ಶರ್ಮ ಅವರು ಅಧಿಕ ಮಾಸದ ವಿಶೇಷತೆ ಹಾಗೂ ಅದರ ಧಾರ್ಮಿಕ ಮಹತ್ವದ ಕುರಿತು ಸಾರ್ವಜನಿಕರಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ಕೆ.ವಿಶ್ವನಾಥ ಮಾಧವ ಪ್ರಭು, ಸಮಾಜ ಬಾಂಧವರು ಹಾಗೂ ಭಜಕರು ಪಾಲ್ಗೊಂಡಿದ್ದರು. ವರದಿ: ದೇವದಾಸ ಕಿಣಿ
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.