ಮೂಡುಬಿದಿರೆ: ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕೃಷ್ಣರಾಜ ಹೆಗ್ಡೆ ನೇತೃತ್ವದ ನಿರ್ದೇಶಕರ ತಂಡಕ್ಕೆ ಸ್ಪಷ್ಟ ಬಹುಮತ ದೊರೆತಿದೆ. ಜುಲೈ 10, 2025ರಂದು ನಡೆದಿದ್ದ ಸೊಸೈಟಿ ಚುನಾವಣೆಯ ನ್ಯಾಯಾಲಯದ್ ಆದೇಶದಂತೆ ಅಧಿಕೃತ ಫಲಿತಾಂಶವನ್ನು ಕಲ್ಲಬೆಟ್ಟು ಸೊಸೈಟಿಯ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪ್ರಕಟಿಸಲಾಯಿತು. ಚುನಾವಣೆಯಲ್ಲಿ ಕೃಷ್ಣರಾಜ ಹೆಗ್ಡೆ ನೇತೃತ್ವದ ತಂಡ, ಬಹುತೇಕ ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಸೊಸೈಟಿಯ ಮೇಲಿನ ತನ್ನ ಹಿಡಿತವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಗೆಲುವು ಸಾಧಿಸಿದ ತಂಡದ ಪ್ರಮುಖ ನಾಯಕ ಕೃಷ್ಣರಾಜ ಹೆಗ್ಡೆ ಅವರನ್ನು ಕಲ್ಲಬೆಟ್ಟು ಸೊಸೈಟಿಯ ಆಡಳಿತ ಚುಕ್ಕಾಣಿ ಹಿಡಿಯಲು ಸದಸ್ಯರು ಮತ್ತೊಮ್ಮೆ ಬೆಂಬಲಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕೃಷ್ಣರಾಜ ಹೆಗ್ಡೆ ಅವರೊಂದಿಗೆ ಸಿಪ್ರಿಯನ್ ಪಿಂಟೋ, ನಳಿನಿ ಆರ್ ಹೆಗ್ಡೆ, ರಮೇಶ್ಚಂದ್ರ ಪಿ, ಸತೀಶ್ ಶೆಟ್ಟಿ, ಯಾದವ ಹಾಗೂ ಜಯಂತಿ ಆಚಾರ್ ಭರ್ಜರಿ ಗೆಲುವು ಸಾಧಿಸಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇವರಲ್ಲದೆ ಸಂಘದ ಇತರ ಪ್ರಮುಖ ಸ್ಥಾನಗಳಿಗೆ ನಡೆದ ಸ್ಪರ್ಧೆಯಲ್ಲಿ ಪದ್ಮಯ ಬಿ ಸುವರ್ಣ, ಸುರೇಶ್ ಕೋಟ್ಯಾನ್, ಸತೀಶ್ ಕೋಟಿಯನ್ ಮತ್ತು ಆಲ್ವಿನ್ ಮಿನೇಜಸ್ ಅವರು ಕೂಡ ಪ್ರಚಂಡ ಬಹುಮತದೊಂದಿಗೆ ಗೆಲುವಿನ ನಗೆ ಬೀರಿದ್ದಾರೆ. ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಇಂದು ಸೊಸೈಟಿಯಲ್ಲಿ ಚುನಾವಣಾ ಅಧಿಕಾರಿಗಳು ಅಧಿಕೃತವಾಗಿ ವಿಜೇತ ಅಭ್ಯರ್ಥಿಗಳ ಘೋಷಣೆ ಮಾಡಿದರು. ಹೊಸ ಆಡಳಿತ ಮಂಡಳಿಯ ಆಯ್ಕೆಗೆ ಸೊಸೈಟಿಯ ಸದಸ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಅನುಭವಿ ನಾಯಕತ್ವಕ್ಕೆ ಒಲಿದ ಜಯ: ಕರಿಂಜೆಗುತ್ತು ಕೃಷ್ಣರಾಜ್ ಹೆಗ್ಡೆ ಹಿರಿಯ ಸಹಕಾರಿ ನಾಯಕರಾಗಿದ್ದು, ಕಳೆದ 35 ವರ್ಷಗಳಿಂದ ಕಲ್ಲಬೆಟ್ಟು ಸೊಸೈಟಿಯ ನಿರ್ದೇಶಕರಾಗಿ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಸುದೀರ್ಘ ಕಾಲದವರೆಗೆ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅಪಾರ ಅನುಭವ ಹೊಂದಿರುವ ಇವರ ನಾಯಕತ್ವಕ್ಕೆ ಮತದಾರರು ಮತ್ತೊಮ್ಮೆ ಮನ್ನಣೆ ನೀಡಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.