ಮೂಡುಬಿದಿರೆ: ಬೆಳುವಾಯಿ ಮೈನ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಶಾಲೆಗೆ ಹೊಸದಾಗಿ ದಾಖಲಾತಿ ಪಡೆದ ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಸಿಹಿ ನೀಡಿ ಸ್ವಾಗತಿಸಲಾಯಿತು. ಸರ್ಕಾರದಿಂದ ನೀಡಲಾದ ಉಚಿತ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಕೆಸರ ಗದ್ದೆಯ ಸುನಂದಾ ಮಾಧವ ಪ್ರಭು ಟ್ರಸ್ಟ್ ವತಿಯಿಂದ ವಿಶ್ವನಾಥ ಮಾಧವ ಪ್ರಭು ಬರೆಯುವ ನೋಟ್ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ, ವಿಜೇತ್ ವಿ ಪ್ರಭು, ನಿವೃತ್ತ ಮುಖ್ಯ ಶಿಕ್ಷಕ ದೇವದಾಸ ಕಿಣಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಜಯ ಕೋಟ್ಯಾನ್, ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ, ಮಾಜಿ ಸದಸ್ಯ ರಾಘು ಪೆಲಕುಂಜ ಮತ್ತು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್ ಭಂಡಾರಿ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಸುವರ್ಣಿ ಸ್ವಾಗತಿಸಿದರು. ಶಿಕ್ಷಕಿ ಸೀಮಾ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಅರುಣಾ ಶೆಟ್ಟಿ ವಂದಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.