ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಮೂಡುಬಿದಿರೆ ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ಮೂಡಬಿದಿರೆ ನ್ಯಾಯಾಲಯದ ಜಂಟಿ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಕೃಷ್ಣರಾಜ್ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗಡೆ ಮತ್ತು ಸ್ಥಾಪಕ ಅಧ್ಯಕ್ಷ ಬಾಹುಬಲಿ ಪ್ರಸಾದ್ ಉಪಸ್ಥಿತರಿದ್ದರು. ಹಿರಿಯ ವಕೀಲ ಕೆ.ಆರ್ ಪಂಡಿತ್, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಭಂಡಾರಿ ಹಾಗೂ ಪ್ರವೀಣ್ ಲೋಬೊ, ಅರಣ್ಯ ಅಧಿಕಾರಿ ಶ್ರೀಧರ್ ಮತ್ತಿತರರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.