ಮೂಡುಬಿದಿರೆ: ನೆಲ್ಲಿಕಾರು ಗ್ರಾಮ ಪಂಚಾಯತ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಭಾ ಕಾರ್ಯಕ್ರಮ ಹಾಗೂ ಪಂಚಾಯತ್ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಉಪವಲಯ ಅರಣ್ಯಾಧಿಕಾರಿ ಬಸಪ್ಪ ಪರಿಸರ ದಿನಾಚರಣೆಯ ಹಾಗೂ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಪ್ರತಿಯೊಬ್ಬರೂ ಪರಿಸರದಲ್ಲಿ ಗಿಡಮರಗಳನ್ನು ನೆಟ್ಟು ಬೆಳೆಸಿ, ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಕಾಪಾಡುವ ಕೆಲಸ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ದಾಮೋದರ, ಅರಣ್ಯ ಪಾಲಕ ಧರ್ಮರಾಜ್, ಗ್ರಾಮ ಪಂಚಾಯತ್ ಸಿಬ್ಬಂದಿ, ಭ್ರಾಮರಿ ಸಂಜೀವಿನಿ ಒಕ್ಕೂಟದ ಲತಾ, ಯಶಸ್ವಿನಿ, ವಿಜಯ, ರಾಜಶ್ರೀ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಕುಮಾರ್ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.